ಕರ್ನಾಟಕ ಮಾದರಿಯಲ್ಲೇ ಮತ್ತೊಂದು ದೊಡ್ಡ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ?

ಕರ್ನಾಟಕ ರಾಜಕೀಯದಲ್ಲಿ ಕಳೆದ 20 ದಿನಗಳಿಂದ ತಲೆದೋರಿದ್ದ ರಾಜಕೀಯ ಅಸ್ಥಿರತೆ ಇದೀಗ ಮಧ್ಯಪ್ರದೇಶ ಕಾಂಗ್ರೆಸ್ಸಿನಲ್ಲೂ ಸೃಷ್ಟಿಯಾಗಿದೆ. ಕರ್ನಾಟಕದ ಮೈತ್ರಿ ಸರ್ಕಾರದ ವಿರುದ್ಧ ತೊಡೆತಟ್ಟಿದ್ದ ಅತೃಪ್ತ ಶಾಸಕರು ರಾಜ್ಯದಲ್ಲಿ ರಾಕ್ಷದ ರಾಜಕಾರಣ ಅಂತ್ಯವಾಗಬೇಕು ಎಂದು ಬರೋಬ್ಬರಿ 20 ಕಾಂಗ್ರೆಸ್ ಜೆಡಿಎಸ್ ಶಾಸಕರು ರಾಜೀನಾಮೆ ಸಲ್ಲಿಸಿ ಮೈತ್ರಿ ಸರ್ಕಾರವನ್ನ ಕೆಡವುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಇದೇ ಮಾದರಿಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್‌ನಲ್ಲೂ ಶಾಸಕರು ತಮ್ಮ ಪಕ್ಷದ ವಿರುದ್ಧವೇ ತಿರುಗಿಬಿದ್ದಿದ್ದು ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಕೂಡ ಶೀಘ್ರದಲ್ಲೇ ಪತನವಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು ಕರ್ನಾಟದಲ್ಲಿ ಯಾವ ರೀತಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಶಾಸಕರು ಬಂಡಾಯವೆದ್ದು ಸರ್ಕಾರದ ವಿರುದ್ಧ ತೊಡೆತಟ್ಟಿ ರಾಜೀನಾಮೆ ಸಲ್ಲಿಸಿದ್ದರೋ ಅದೇ ಮಾದರಿಯಲ್ಲಿ ಇದೀಗ ಮಧ್ಯಪ್ರದೇಶ ಕಾಂಗ್ರೆಸ್ಸಿನ ಶಾಸಕರೂ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ.

ಈ ವಿಷಯವನ್ನ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ 79 ಹಾಗು ಜೆಡಿಎಸ್ 37 ಶಾಸಕರಿದ್ದರು, ಇದರ ಜೊತೆಗೆ ಇಬ್ಬರು ಪಕ್ಷೇತರರು ಹಾಗು ಬಿಎಸ್‌ಪಿ ಪಕ್ಷದ ಶಾಸಕರೂ ಆಯ್ಕೆಯಾಗಿದ್ದರು. ‌ಮಾಯಾವತಿ ನೇತೃತ್ವದ ಬಿಎಸ್‌ಪಿ ಶಾಸಕ ಎನ್.ಮಹೇಶ್ ರವರಿಗೆ ಮಾಯಾವತಿ ಮೈತ್ರಿ ಸರ್ಕಾರದ ಪರ ಮತ ಹಾಕುವಂತೆ ಸೂಚಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಮಹೇಶ್ ಸದನಕ್ಕೆ ಗೈರಾಗಿ ಮೈತ್ರಿ ಸರ್ಕಾರದ ಪರ ಮತ ಹಾಕದಿದ್ದ ಕಾರಣ ನೆನ್ನೆಯಷ್ಟೇ ಮಾಯಾವತಿ ಮಹೇಶ್ ರವರನ್ನ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು.

ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ಸಿಗೆ ಪೂರ್ಣ ಬಹುಮತವಿರದಿದ್ದ ಕಾರಣ ಬಿಎಸ್‌ಪಿ ಹಾಗು ಎಸ್‌ಪಿ ಪಕ್ಷಗಳು ಬೆಂಬಲ ಸೂಚಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಆದರೆ ಇದೀಗ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗು ಬಿಎಸ್‌ಪಿ, ಎಸ್‌ಪಿ ನಡುವೆ ಭಿನ್ನಮತ ಉಂಟಾಗಿದ್ದು ಈ ಕಾರಣಕ್ಕಾಗಿ ಒಂದು ವೇಳೆ ಕಾಂಗ್ರೆಸ್ ಸರ್ಕಾರ ಪತನವಾದರೆ ನಮ್ಮನ್ನ ದೂಷಿಸಬೇಡಿ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ರವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಜಿತು ಪಟ್ವಾರಿ “ಕಮಲನಾಥ್ ರವರ ನೇತೃತ್ವದ ಸರ್ಕಾರಕ್ಕೆ ಕರ್ನಾಟಕ ಮಾದರಿಯಲ್ಲೇ ಬಿಕ್ಕಟ್ಟುಗಳನ್ನ ತಂದೊಡ್ಡಲು ಬಿಜೆಪಿ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿದೆ. ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರವಷ್ಟೇ ಅಲ್ಲದೆ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಸರ್ಕಾರ ಕೆಡವಿ ಬಿಜೆಪಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

– Team Google Guruu

Leave a Reply

Your e-mail address will not be published. Required fields are marked *

error: Content is protected !!