ಪ್ರಧಾನಮಂತ್ರಿ ಸ್ಥಾನಕ್ಕೇರಲು ಮೋದಿ ಬೆನ್ನಿಗೆ ಚೂರಿ ಹಾಕಲು ಹೊರಟಿದ್ದ ಚಂದ್ರಬಾಬು ನಾಯ್ಡು ಆಂಧ್ರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ

ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಭಾರೀ ಮುಖಭಂಗ ಆಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಜೊತೆಗೆ ಅಲ್ಲಿನ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. ಇತ್ತೀಚೆಗಿನ ಮಾಹಿತಿ ಪ್ರಕಾರ, ವೈಎಸ್​ಆರ್​ಸಿಪಿ 150 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಾಗೇ ಆಡಳಿತ ಪಕ್ಷ ಟಿಡಿಪಿ 23, ಜೆಎಸ್ಪಿ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್​ ಯಾವುದೇ ಕ್ಷೇತ್ರದಲ್ಲೂ ಮುನ್ನಡೆ ಕಾಯ್ದುಕೊಂಡಿಲ್ಲ.

175 ವಿಧಾನಸಭೆ ಕ್ಷೇತ್ರಗಳಲ್ಲಿ ಚಂದ್ರಬಾಬು ನಾಯ್ಡು ಪಕ್ಷ ಕೇವಲ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಚಂದ್ರಬಾಬು ನಾಯ್ಡು ಅವರ ಸೋಲು ಬಹುತೇಕ ಖಚಿತವಾಗಿದೆ. ಹೀಗಾಗಿ ಚಂದ್ರಬಾಬು ನಾಯ್ಡು ಸಿಎಂ ಸ್ಥಾನಕ್ಕೆ ಕೆಲವೇ ಹೊತ್ತಿನಲ್ಲಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಇನ್ನು, ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿಯೂ ವೈಎಸ್​​ಆರ್​ ಕಾಂಗ್ರೆಸ್​ 25 ಕ್ಷೇತ್ರಗಳಲ್ಲೂ ಮುನ್ನಡೆ ಕಾಯ್ದುಕೊಂಡಿದೆ.

Leave a Reply

Your e-mail address will not be published. Required fields are marked *

You may have missed

error: Content is protected !!