ಪೆಟ್ರೋಲ್ ಡೀಸೆಲ್ ದರ ಏರಿಕೆಯಾದ ಕಾರಣ ಕೇಂದ್ರ ಸರಕಾರದಿಂದ ಬಂತು ಹೊಸ ಯೋಜನೆ

ಈ ಬಾರಿಯ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಜಾಸ್ತಿ ಮಾಡಲಾಗಿದ್ದು ದೇಶದ ಜನತೆಗೆ ಅತಿ ದೊಡ್ಡ ಹೊಡೆತವಾಗಿದೆ ಎನ್ನಬಹುದು, ಈ ನಿಟ್ಟಿನಲ್ಲಿ ದಿಢೀರ್ ನಿರ್ಧಾರ ಕೈಗೊಂಡ ಕೇಂದ್ರ ಸರಕಾರ ಪೆಟ್ರೋಲ್ ಡೀಸೆಲ್ ದರಕ್ಕೆ ಪ್ರತಿಯಾಗಿ ಅನ್ಯಮಾರ್ಗ ಕಂಡುಕೊಳ್ಳಲು ಮುಂದಾಗಿದೆ.

ಹೌದು ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರಗಳು ಗಗನಕ್ಕೇರುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ವಿದ್ಯುತ್​ ಚಾಲಿತ ವಾಹನಗಳ ಬಳಕೆಗೆ ಒತ್ತು ನೀಡಲು ಮುಂದಾಗಿದೆ. ಇತ್ತೀಚಿಗಷ್ಟೇ ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನಗಳ ವಾಹನಗಳನ್ನು ಯಾವುದೇ ಪರ್ಮಿಟ್ ಇಲ್ಲದೇ ರಸ್ತೆಗಿಳಿಸಬಹುದು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರು.

ಇದೀಗ ಸಾರ್ವಜನಿಕ ಬಳಕೆಗೂ ಎಲೆಕ್ಟ್ರಿಕ್ ಬಸ್​ಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಪ್ರಸ್ತಾವನೆ ಮುಂದಿಟ್ಟಿದ್ದು, ಇದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಹೊಸ ಎಲೆಕ್ಟ್ರಿಕ್ ಬಸ್​ ಸೇವೆಗೆ ಯೋಜನೆಗಳನ್ನು ರೂಪಿಸಿದೆ. ಈ ಬಗ್ಗೆ ನೀತಿ ಆಯೋಗ  ಖಾಸಗಿ ಸಂಸ್ಥೆಗಳಿಗೆ ಹೊಸ ಯೋಜನೆಗೆ ಕೈ ಜೋಡಿಸುವಂತೆ ಕೇಳಿಕೊಳ್ಳಲಾಗಿದೆ ಎನ್ನಲಾಗಿದೆ.

ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಲಿದ್ದು, ಇದರ ಮೊದಲ ಹಂತದಲ್ಲಿ ನಗರ ಪ್ರದೇಶದಲ್ಲಿ ಅಂತರಾಷ್ಟ್ರೀಯ ಮಟ್ಟದ ಎಲೆಕ್ಟ್ರಿಕ್ ಬಸ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದರಿಂದ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದಲ್ಲದೆ, ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿಕೊಳ್ಳಬಹುದು ಎಂದು ನೀತಿ ಆಯೋಗ ಅಭಿಪ್ರಾಯ ಪಟ್ಟಿದೆ.

ಪೆಟ್ರೋಲ್​ ಬೆಲೆಗಳು ಹೆಚ್ಚಾಗುತ್ತಿರುವುದರಿಂದ ಬಸ್ ಪ್ರಯಾಣ ದರ ಮತ್ತು ದಿನಬಳಕೆ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಎಲೆಕ್ಟ್ರಿಕಲ್ ವಾಹನ ಬಳಕೆಗೆ ಹೆಚ್ಚು ಒತ್ತು ನೀಡಲು ತಿರ್ಮಾನಿಸಿದೆ ಎನ್ನಲಾಗಿದೆ. ಹೀಗಾಗಿ ಇನ್ಮುಂದೆ ಹೊಗೆಮುಕ್ತ ವಾತಾವರಣ ನಿರ್ಮಾಣವಾಗಿ ಆರೋಗ್ಯಕರ ಜೀವನ ನಮ್ಮದಾಗಲಿದೆ ಎನ್ನಬಹುದು.

-Team Google Guru

Leave a Reply

Your e-mail address will not be published. Required fields are marked *

error: Content is protected !!