ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಟ್ಟ ಮಾಜಿ ಮುಖ್ಯಮಂತ್ರಿ; ಅಷ್ಟಕ್ಕೂ ಸಿದ್ದರಾಮಯ್ಯನವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಗೊತ್ತಾ.?

ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶ ಇಡೀ ದೇಶವಷ್ಟೇ ಅಲ್ಲ ಇಡೀ ವಿಶ್ವವೇ ಬೆಚ್ಚಿ ಬೆರಗಾಗುದೆ ಎಂದು ಹೇಳಬಹುದು ಹೌದು ಪ್ರಧಾನಿ ಮೋದಿ ಅಲೆಯಿಂದಾಗಿ ಪ್ರಚಂಡ ಬಹುಮತ ಪಡೆಯುವಲ್ಲಿ ಮೋದಿ ಸರಕಾರ ಮತ್ತೆ ಕೇಂದ್ರದಲ್ಲಿ ತಲೆ ಎತ್ತಿ ನಿಂತಿದೆ, ಈ ಹಿನ್ನೆಲೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಹೇಳ್ತಾರೆ ಅಂತ ಯಾರೂ ಸಹ ಊಹಿಸಿರಲಿಲ್ಲ.

ಕರ್ನಾಟಕದ ದೋಸ್ತಿ ಪಕ್ಷದ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ತಮ್ಮ ರಾಜಕೀಯ ನಿರ್ಧಾರ ಬದಲಿಸಲು ತೀರ್ಮಾನಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಿಂದೆ ಜರ್ಮನಿಯಲ್ಲಿ ಯಶಸ್ವಿಯಾಗಿದ್ದ ಗೋಬೆಲ್ಸ್ ನೀತಿಯನ್ನು ಭಾರತದಲ್ಲಿ ಯಶಸ್ವಿಯಾಗಿ ಅಳವಡಿಸಿಕೊಂಡಿದೆ.

ಮೋದಿ ಮೇನಿಯಾ ಸೃಷ್ಟಿಸಿ ಅಧಿಕಾರ ಪಡೆದಿರುವ ಮೋದಿ ಸರಕಾರ. ಇಂತಹ ಸಂದರ್ಭದಲ್ಲಿ ಸೈದ್ಧಾಂತಿಕ ರಾಜಕಾರಣ ಕಷ್ಟಸಾಧ್ಯ. ಹಾಗಾಗಿ ಚುನಾವಣೆ ರಾಜಕೀಯದಿಂದ ಸಿದ್ದರಾಮಯ್ಯ ದೂರ ಸರಿಯಲಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಪಿಸು ಪಿಸು ಮಾತುಗಳು ಕೇಳಿ ಬರುತ್ತಿವೆ.

ಚುನಾವಣೆ ರಾಜಕೀಯದ ಕುರಿತಾಗಿ ನನಗೆ ಆಸಕ್ತಿಯಿಲ್ಲ ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಕಲಬುರ್ಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾಡಿದಷ್ಟು ಕೆಲಸವನ್ನು ಯಾರೂ ಮಾಡಲು ಸಾಧ್ಯವಿಲ್ಲ ಆದರೂ ಅವರು ಅಲ್ಲಿ ಸೋಲನ್ನಪ್ಪಿದ್ದಾರೆ.

ಅದೇ ರೀತಿ ಸಂಸತ್ ನಲ್ಲಿ ಕರ್ನಾಟಕದ ಪರವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಬಲ ಧ್ವನಿಯಾಗಿದ್ದರು ಅವರು ಕೂಡ ಪರಾಭವಗೊಂಡಿದ್ದಾರೆ. ಕೋಲಾರದಲ್ಲಿ ಸೋಲರಿಯದ ಸರದಾರರಾಗಿದ್ದ ಕೆ.ಹೆಚ್. ಮುನಿಯಪ್ಪ ಕೂಡ ಪರಾಭವಗೊಂಡಿದ್ದಾರೆ. ಮೋದಿಯ ಅಲೆಯಲ್ಲಿ ಜನರಿಗೆ ಗೊತ್ತಿಲ್ಲದ ಅನೇಕ ರಾಜಕಾರಣಿಗಳು ಮೋದಿ ಹೆಸರಿನಲ್ಲೇ ಜಯಗಳಿಸಿದ್ದಾರೆ ಎಂದರು.

ಜನರಿಗಾಗಿ ಕೆಲಸ ಮಾಡಿದ ಜನಪ್ರತಿನಿಧಿಗಳು ಸೋಲು ಕಂಡಿದ್ದಾರೆ. ಸಾಮಾಜಿಕ ನ್ಯಾಯದ ಕಳಕಳಿಯ ಹೊಂದಿದವರಿಗೆ ಚುನಾವಣೆ ನಡೆಸುವುದು ಕಷ್ಟ ಸಾಧ್ಯವಾಗಿದೆ. ಚುನಾವಣೆ ರಾಜಕೀಯ ನನಗೆ ಬೇಸರ ತರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗುತ್ತಿದೆ.

ಈ ವಿಧಾನಸಭೆಯ ಅವಧಿ ಮುಗಿದ ಬಳಿಕ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ನಾವು ಯಾರ ಪರವಾಗಿ ಹೋರಾಟ ನಡೆಸಲು ಮುಂದಾಗಿದ್ದೆವೆಯೋ ಅವರೇ ಗೋಬೆಲ್ಸ್  ನೀತಿಯ ಪರ ನಿಂತಿದ್ದು ಇಂತಹ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಹೇಳುವುದು ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸಿದ್ದರಾಮಯ್ಯ, ಚುನಾವಣೆ ರಾಜಕಾರಣದಿಂದ ದೂರ ಸರಿಯುವ ಮಾತುಗಳನ್ನಾಡಿದ್ದಾರೆ ಎಂದು ಹೇಳಲಾಗಿದೆ.

-Team Google Guru

Leave a Reply

Your e-mail address will not be published. Required fields are marked *

error: Content is protected !!