ರಾತ್ರಿ ಮಲಗುವ ಮುನ್ನ ಈ ರೀತಿ ಮಾಡಿದರೆ ಹಾರ್ಟ್ ಅಟ್ಯಾಕ್ ಆಗುವುದಿಲ್ಲ

ಹೃದಯಾಘಾತಗಳ ಬಗ್ಗೆ ಅತ್ಯಂತ ಮುಖ್ಯ ಮಾಹಿತಿಗಳನ್ನು ಪ್ರತಿಯೊಬ್ಬರೂ ತಿಳಿದಿರಬೇಕೆಂಬುದಕ್ಕೆ ಎರಡು ಕಾರಣಗಳಿವೆ. ಮೊದಲನೆಯದಾಗಿ, ಜೀವಮಾನದ ಅವದಿಯಲ್ಲಿ ನಿಮಗೆ ಅಥವಾ ನಿಮ್ಮ ಪ್ರೀತಿಪಾತ್ರರಾದ ಯಾರಿಗಾದರೂ ಹೃದಯಾಘಾತದ ಸಂಭವನೀಯತೆ ಹೆಚ್ಚಿಗಿರುತ್ತದೆ. 

ಎರಡನೆಯದಾಗಿ, ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ. ಹೃದಯಾಘಾತವೆಂದರೇ ಕೊರೋನರಿ ರಕ್ತನಾಳದಲ್ಲಿ ರಕ್ತಪರಿಚಲನೆಗೆ ತಡೆಯುಂಟಾಗಿ ಹೃದಯದ ಸ್ನಾಯು ಸಾವಪ್ಪುವುದೇ ಹೃದಯಾಘಾತ.

ಕೋರೋನರಿ ರಕ್ತನಾಳದಲ್ಲಿ ಹರಳು ಶೇಖರಣೆಯಾಗಿ ರಕ್ತವು ಹೆಪ್ಪುಗಟ್ಟಿ (ಬ್ಲಡ್‌ಕ್ಲಾಟ್) ರಕ್ತದ ಸರಾಗ ಹರಿವು ನಿಲ್ಲುತ್ತದೆ. ಹೃದಯದ ಸ್ನಾಯುವಿಗೆ ರಕ್ತ ಸರಬರಾಜು ಆಗದಿದ್ದಾಗ ಅದಕ್ಕೆ ಆಮ್ಲಜನಕದ ಕೊರತೆ ಉಂಟಾಗುತ್ತದೆ. ರಕ್ತಚಲನೆ ಕೆಲವು ಗಂಟೆಗಳಲ್ಲಿ ಮರುಸ್ಥಾಪನೆ ಆಗದಿದ್ದರೆ ಹೃದಯದ ಸ್ನಾಯು ಸಾವನ್ನಪ್ಪುತ್ತದೆ. 

ಹೃದಯಾಘಾತ ಸಂಭವಿಸಿದ ಮೊದಲ 3-6 ಗಂಟೆಗಳು ಅತೀ ಗಂಭೀರ. ಮೊದಲಿಗೆ ತೀವ್ರ ಹೃದಯಾಘಾತ ಸಂಭವಿಸುವ ಕೆಲವು ಗಂಟೆಗಳ ಮುಂಚೆ ಹೃದಯಬಡಿತದ ಏರುಪೇರು ಕಾಣಿಸಿಕೊಳ್ಳುತ್ತದೆ. ಹೃದಯಬಡಿತದ ಏರುಪೇರು ರೋಗಿಯು ವೈದ್ಯಕೀಯ ಆರೈಕೆಯಲ್ಲಿದ್ದಾಗ ಸಂಭವಿಸಿದರೆ ಸಕಾಲದಲ್ಲಿ ಅನಾಹುತ ತಪ್ಪಿಸಬಹುದು. 

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹೆಚ್ಚಾಗಿ ಈ ಹೃದಯಾಘಾತವು ರಾತ್ರಿಯ ವೇಳೆಯಲ್ಲಿ ಸಂಭವಿಸುತ್ತದೆ. ಆದರೆ ಸಂಶೋಧನೆಯೊಂದರ ಪ್ರಕಾರ ರಾತ್ರಿ ಮಲಗುವಾಗ ಹೀಗೆ ಮಾಡಿದರೆ ಹೃದಯದ ಆರೋಗ್ಯ ಉತ್ತಮವಾಗುವುದಲ್ಲದೇ ಹೃದಯಾಘಾತ ಸಂಭವಿಸುವುದಿಲ್ಲ.

ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ವೈದ್ಯರು ಹೇಳಿದ್ದಾರೆ.

ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಆರೋಗ್ಯಕರವಾಗಿದ್ದ ಸುಮಾರು 149 ಜನರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು. 149 ಜನರ ಪೈಕಿ ಕೆಲವರು ಮಲಗುವುದಕ್ಕೂ ಮುನ್ನ ಯೋಗ ಸಂಗೀತವನ್ನು ಆಲಿಸಿದರೆ, ಇನ್ನು ಕೆಲವರು ಪಾಪ್ ಮ್ಯೂಸಿಕ್ ಗೆ ಕಿವಿಕೊಟ್ಟಿದ್ದರು, ಮತ್ತೆ ಕೆಲವರು ಯಾವುದೇ ಸಂಗೀತವನ್ನೂ ಕೇಳದೇ ಹಾಗೆಯೇ ನಿದ್ದೆ ಮಾಡಿದ್ದರು.

ಯೋಗ ಸಂಗೀತ ಕೇಳುವ ವೇಳೆಯಲ್ಲಿ ಹೃದಯ ಬಡಿತ ವ್ಯತ್ಯಾಸ ಹೆಚ್ಚಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳುವ ವೇಳೆಯಲ್ಲಿ ಇಳಿಕೆಯಾಗಿತ್ತು, ನಿಶಬ್ದವಾಗಿದ್ದಾಗ ಯಾವುದೇ ಬದಲಾವಣೆಗಳೂ ಇರಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ.

-Team Google Guru

Leave a Reply

Your e-mail address will not be published. Required fields are marked *

error: Content is protected !!