ಕರ್ನಾಟಕ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರು ಖೆಡ್ಡಾಗೆ; ಕೊನೆಗೂ ಸಕ್ಸಸ್ ಆಯ್ತು ಅಮಿತ್ ಶಾಹ್ ಮಾಸ್ಟರ್‌ಪ್ಲ್ಯಾನ್

ಯಾವ ಕ್ಷಣದಲ್ಲಿ ಬೇಕಾದರೂ ಕರ್ನಾಟಕ ಹಾಗು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಬಹುದು ಎನ್ನಲಾಗುತ್ತಿದೆ. ಈ ಎರಡೂ ರಾಜ್ಯಗಳಲ್ಲಿ ಕೆಲ ಕಾಂಗ್ರೆಸ್ ಶಾಸಕರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಇದೀಗ ಕರ್ನಾಟಕ, ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲವನ್ನೇ ಎಬ್ಬಿಸಿಬಿಟ್ಟಿದೆ.

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಒಂದು ವೇಳೆ ಮೋದಿ ಮತ್ತೆ ಗೆದ್ದರೆ ದೇಶದ ಎರಡು ದೊಡ್ಡ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿವೆ ಎಂದು ಹೇಳಲಾಗುತ್ತಿತ್ತು, ಆ ಎರಡೂ ರಾಜ್ಯಗಳಲ್ಲಿ ನಮ್ಮ ಕರ್ನಾಟಕ ಹಾಗು ಮಧ್ಯಪ್ರದೇಶ ಕೂಡ ಒಂದು. ಇದೀಗ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.

ಕರ್ನಾಟಕ ಹಾಗು ಮಧ್ಯಪ್ರದೇಶ ರಾಜ್ಯಗಳ ಸರ್ಕಾರದ ಹಲವು ಕಾಂಗ್ರೆಸ್ ಶಾಸಕರು ಈಗ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ಸಿನ 5 ಹಾಗು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ಸಿನ 10 ಜನ ಶಾಸಕರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸುದ್ದಿ ಮೂಲಗಳ ಪ್ರಕಾರ ಅಮಿತ್ ಶಾಹ್ ಈ ಎರಡೂ ರಾಜ್ಯಗಳಲ್ಲಿ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದ್ದಾರೆ.

ಈ ಎರಡೂ ರಾಜ್ಯಗಳಲ್ಲಿ ಅತಿ ಹೆಚ್ಚು ಚರ್ಚೆಯಲ್ಲಿರುವ ರಾಜ್ಯವೆಂದರೆ ಅದು ಕರ್ನಾಟಕ, ಮೊನ್ನೆಯಷ್ಟೇ ನೂತನವಾಗಿ ಆಯ್ಕೆಯಾದ ಸಂಸದರೊಬ್ಬರು ಮಾತನಾಡುತ್ತ ಬಹಳ ಬೇಗ ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬರಲಿದ್ದಾರೆ ಹಾಗು ಕಾಂಗ್ರೆಸ್ಸಿನಿಂದ 5-6 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂಬ ಸ್ಪೋಟಕ ಮಾಹಿತಿಯನ್ನ ಹೊರ ಹಾಕಿದ್ದರು.

ಕರ್ನಾಟಕದವಷ್ಟೇ ಅಲ್ಲದೆ ಮಧ್ಯಪ್ರದೇಶದಲ್ಲೂ ಇದೇ ಸ್ಥಿತಿಯಿದೆ:

ಕೆಲ ದಿನಗಳ ಹಿಂದೆ ಬಿಜೆಪಿಯ ವರಿಷ್ಠ ನಾಯಕ ಹಾಗು ಮಾಹಸಚಿವರಾಗಿರುವ ಕೈಲಾಶ್ ವಿಜಯವರ್ಗೀಯ್ ರವರು ಮಾತನಾಡುತ್ತ ಕಮಲನಾಥ್ ಇನ್ನೂ 20 ರಿಂದ 22 ದಿನಗಳವರೆಗೆ ಮಾತ್ರ ಮುಖ್ಯಮಂತ್ರಿಯಾಗಿರಲಿದ್ದಾರೆ, ಅದಾದ ಬಳಿಕ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೋ ಇಲ್ಲವೋ ಎಂಬುದು ಡೌಟ್ ಎಂದಿದ್ದರು.

ಮುಂಬರುವ ಕೆಲ ದಿನಗಳಲ್ಲಿ ಈ ಎರಡೂ ರಾಜ್ಯಗಳಲ್ಲಿ ನೂತನ ಸರ್ಕಾರ ರಚನೆಯಾಗಬಹುದು ಎಂದು ಹೇಳಲಾಗುತ್ತಿದೆ ಹಾಗು ಈಗಿನಿಂದಲೇ ರಾಜಕೀಯವಾಗಿ ಈ ಎರಡೂ ರಾಜ್ಯಗಳಲ್ಲಿ ಅಮಿತ್ ಶಾಹ್ ಕೋಲಾಹಲವನ್ನೇ ಎಬ್ಬಿಸಿಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿನ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರಿ 25 ಸ್ಥಾನಗಳನ್ನ ಗೆದ್ದರೆ ಜೆಡಿಎಸ್ ಹಾಗು ಕಾಂಗ್ರೆಸ್ ಕೇವಲ ತಲಾ 1 ಸ್ಥಾನಕ್ಕೆ ಕುಸಿದಿದ್ದವು.

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬದಲಾವಣೆಗಳಾಗುತ್ತಿದ್ದು ಯಾವ ಕ್ಷಣದಲ್ಲಿ ಬೇಕಾದರೂ ಮೈತ್ರಿ ಸರ್ಕಾರ ಉರುಳಿ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಮೊನ್ನೆಯಷ್ಟೇ ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಮಾತನಾಡುತ್ತ ನಾನು ನನ್ಮ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದರು.

ಅತ್ತ ಬೆಂಗಳೂರಿನ ಶಿವಾಜಿನಗರದ ಕಾಂಗ್ರೆಸ್ ಶಾಸಕ ಹಾಗು ಕಾಂಗ್ರೆಸ್ಸಿನ ಹಿರಿಯ ನಾಯಕ ರೋಷನ್ ಬೇಗ್ ಕೂಡ ಸಿದ್ದರಾಮಯ್ಯ, ರಾಹುಲ್ ಗಾಂಧಿ‌, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ ಹಾಗು ದಿನೇಶ್ ಗುಂಡುರಾವ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು ಹಾಗು ಸಂದರ್ಭ ಬಂದರೆ ಬಿಜೆಪಿ ಪಕ್ಷ ಸೇರ್ಪಡೆಯಾಗುವ ಸೂಚನೆಯನ್ನೂ ನೀಡಿದ್ದರು‌.

– Team Google Guruu

Leave a Reply

Your e-mail address will not be published. Required fields are marked *

error: Content is protected !!