ರಾಹುಲ್ ಗಾಂಧಿ ರಾಜಿನಾಮೆ ಕುರಿತಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದೆನು ಗೊತ್ತಾ..?

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಕಣಕ್ಕಿಳಿದ ರಾಹುಲ್ ಗಾಂಧಿ ಭಾರಿ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ, ಅಮೇಠಿಯಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿಯನ್ನು ಚುನಾವಣೆಯಲ್ಲಿ ಸೋಲಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತ ರಾಹುಲ್ ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳಲು ರಾಜಿನಾಮೆಗೆ ಮುಂದಾಗಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರೂ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿರುವ ಕಾರಣ ದೇಶಾದ್ಯಂತ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದರಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ತಾಯಿ ಸೋನಿಯಾ ಗಾಂಧಿ ಮುಂದೆ ತಿಳಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಸ್ಥಿತಿಯಿಂದಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಹುಲ್ ಗಾಂಧಿಯ ರಾಜಿನಾಮೆ ನಿರ್ಧಾರದ ಕುರಿತಾಗಿ ಬಹು ಭಾಷಾ ನಟ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಅಭಿಪ್ರಾಯ ಬಿಚ್ಚಿಟ್ಟಿದ್ದಾರೆ.

ಮಾಧ್ಯಮ ಪ್ರತಿನಿದಿಯೊಬ್ಬರು ರಾಹುಲ್ ಗಾಂಧಿಯ ರಾಜಿನಾಮೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಸೂಪರ್ ಸ್ಟಾರ್ ರಜನಿಕಾಂತ್ “ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದುಕೊಂಡೇ ಅಸಾಧ್ಯವಾಗುವುದನ್ನು ತಮ್ಮಿಂದ ಸಾಧ್ಯ” ಎಂದು ಸಾಧಿಸಿ ತೋರಿಸಬೇಕು ಎಂದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಯುವ ನಾಯಕನಾಗಿ ಹಿರಿಯ ನಾಯಕರನ್ನು ನಿಭಾಯಿಸುವುದು ಕಷ್ಟವಾಗಬಹುದು. ಆದರೆ ಅವರು ಅದನ್ನು ಸಾಧಿಸಿ ತೋರಿಸಬೇಕು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷವೂ ಪ್ರಬಲವಾಗಿರಬೇಕು ಎಂದು ರಜನಿಕಾಂತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

-Team Google Guru

Leave a Reply

Your e-mail address will not be published. Required fields are marked *

error: Content is protected !!